ಮೈಸೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಅಂತ ತಿಳಿಸಿದರು.