ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾಗೆ ನಿರಾಸೆ ಆಗಿದ್ದು, ಬಿಜೆಪಿ ಹೈಕಮಾಂಡ್ ನಿರ್ಧಾರದಿಂದ ರೆಬೆಲ್ ಸಂಸದೆ ಅಕ್ಷರಶಃ ಆಕ್ರೋಶಗೊಂಡಿದ್ದಾರೆ. ಯಾವುದೇ ಕಾರಣಕ್ಕೂ ಮಂಡ್ಯ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದ ಸುಮಲತಾ, ಮಂಡ್ಯ ಬಿಜೆಪಿ ಲೋಕಸಭಾ ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಹೀಗಾಗಿ ಶನಿವಾರ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆಗೆ ಸುಮಲತಾ ಆಪ್ತರು, ಬೆಂಬಲಿಗರು, ಮಂಡ್ಯ ಲೋಕಸಭಾ ಕ್ಷೇತ್ರದ ಸ್ಥಳೀಯ ಮುಖಂಡರಿಗೆ ಆಹ್ವಾನ ನೀಡಿದ್ದಾರೆ. ಇದೇ ಸಭೆಯಲ್ಲಿ ಮುಂದಿನ ನಡೆ ಬಗ್ಗೆ ತೀರ್ಮಾನಿಸಲಿದ್ದಾರೆ ಎಂದು ತಿಳಿದು ಬಂದಿದೆ.