ವಕ್ಫ್ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ಈಗ ರಾಜ್ಯ ಸರ್ಕಾರದ ಗುತ್ತಿಗೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ನೀಡುವ ಕುರಿತಂತೆ ಗೊಂದಲ ಸೃಷ್ಟಿಯಾಗಿದೆ. ಗೊಂದಲಕ್ಕೆ ಕಾರಣವಾಗಿರುವುದು ಈ ಕುರಿತಂತೆ ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಬರೆದಿರುವ ಪತ್ರ. ಪತ್ರದಲ್ಲಿ ಪ್ರವರ್ಗ 2ಬಿ ಅಡಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ.
ಈ ಪತ್ರಕ್ಕೆ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ್, ಆಸೀಫ್ ಸೇಠ್, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕಿಸ್ ಬಾನು ಕೂಡಾ ಸಹಿ ಮಾಡಿದ್ದಾರೆ. ಇದರಂತೆ, ಕಾಯ್ದೆಗೆ ತಿದ್ದುಪಡಿ ಮಾಡಿ ಕಡತ ಮಂಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಇದನ್ನು ಓದಿ : RCB ಟೀಮ್ಗೆ ಮತ್ತೋರ್ವ ಕನ್ನಡಿಗ ಎಂಟ್ರಿ!
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತದಾನ ಒಂದು ದಿನ ಬಾಕಿ ಇರುವಾಗಲೇ ಮೀಸಲಾತಿ ವಿಚಾರ ಮುನ್ನಲೆಗೆ ಬಂದಿದ್ದು, ರಾಜ್ಯ ಸರ್ಕಾರ ಧರ್ಮ ಸಂಕಟಕ್ಕೆ ಸಿಲುಕಿದೆ. ಈ ಚರ್ಚೆ ಮತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುವುದನ್ನು ಮನಗಂಡ ಕಾಂಗ್ರೆಸ್ ಸರ್ಕಾರ ಕೂಡಲೇ ಎಚ್ಚೆತ್ತು ಸ್ಪಷ್ಟನೆ ನೀಡಿರುವ ಸರ್ಕಾರ, ಇಂತಹ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದೆ. ಆದರೆ, ಶೇ4ರಷ್ಟು ಮೀಸಲಾತಿಗಾಗಿ ಅಲ್ಪಸಂಖ್ಯಾತ ಶಾಸಕರು, ಸಚಿವರು ನೀಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿ, ಕಡತ ಮಂಡಿಸಲು ಸೂಚಿಸಿರುವುದು ಗೊಂದಲ ಮೂಡಿಸಿದೆ.
ಇದನ್ನು ಓದಿ : ಹಿಜ್ಬುಲ್ಲಾ ದಾಳಿಗೆ ಮತ್ತೆ ಕೆರಳಿದ ಇಸ್ರೇಲ್, ಖಡಕ್ ಎಚ್ಚರಿಕೆ!
ಈ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಉಪಚುನಾವಣೆಗೂ ಮುನ್ನ ಮುಸ್ಲಿಂ ಮತಗಳ ಕ್ರೋಡೀಕರಣದ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರದ ಹೇಯ ನಡೆ ಇದು ಎಂದು ಟೀಕಿಸಿದ್ದಾರೆ. ಟೆಂಡರ್ ಅನ್ನು ಕೆಟಿಟಿಪಿ ಕಾಯ್ದೆಯ ಆಧಾರದ ಮೇಲೆ ನೀಡಬೇಕೇ ವಿನಹ ಜಾತಿ, ಆಧಾರದ ಮೇಲೆ ಅಲ್ಲ. ಮುಖ್ಯಮಂತ್ರಿಗಳು ಬೂಟಾಟಿಕೆ ಬಿಟ್ಟು ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಯತ್ನಾಳ್ ಹೇಳಿದ್ದಾರೆ.