ದೇಶಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಸಂಚಲನ ಸೃಷ್ಟಿಸಿದೆ. ಸಂಸದ ಪ್ರಜ್ವಲ್ ರೇವಣ್ಣನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗಾಗಿ ವಿಶೇಷ ತನಿಖಾ ತಂಡ ಸಹಾಯವಾಣಿ ತೆರೆದಿದೆ.ಎಸ್ಐಟಿ ಪತ್ರದಲ್ಲಿ ಏನಿದೆ?
ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಕುರಿತು ಈಗಾಗಲೇ ವಿಶೇಷ ತಂಡ ಎಸ್ಐಟಿಯನ್ನ ರಚಿಸಲಾಗಿದೆ.
ತನಿಖಾ ಕಾಲದಲ್ಲಿ ಈ ಘಟನೆಗೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರಿರುವುದು ಗೊತ್ತಾಗಿದ್ದು, ಯಾರೇ ಸಂತ್ರಸ್ತರು ಅಥವಾ ಬಾತ್ಮೀ ದಾರರಿಗೆ ಕಾನೂನಿನ ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಸಹಾಯ ಬೇಕಾದಲ್ಲಿ ಹೆಲ್ಪ್ ಲೈನ್ ನಂ. 6360938947 ಗೆ ಕರೆ ಮಾಡಬಹುದಾಗಿದ್ದು, ಸಂತ್ರಸ್ತರು ಮತ್ತು ಬಾತ್ಮೀದಾರ ವಿವರಗಳನ್ನು ಗುಪ್ತವಾಗಿಡಲಾಗುವುದು.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೋದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು.
ಈ ಹಿನ್ನೆಲೆಯಲ್ಲಿ ವಿಡಿಯೋಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರು, ನಾನವಳಲ್ಲ ಎಂಬ ಉತ್ತರವನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕೆಲ ಸಂತ್ರಸ್ತೆಯರು ಮರ್ಯಾದೆಗೆ ಹೆದರಿ ವಿಚಾರಣೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಸಂಸ್ರಸ್ತೆರಿಗಾಗಿ ಸಹಾಯವಾಣಿ ಆರಂಭಿಸಿದೆ.