ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಹಠಾತ್ ಭೂಕುಸಿತ ಮತ್ತು ಪ್ರವಾಹದಲ್ಲಿ ಐವರು ಸಾವನ್ನಪ್ಪಿದ್ದಾರೆ. ಪ್ರವಾಹದಲ್ಲಿ ಹಲವರು ಗಾಯಗೊಂಡಿದ್ದಾರೆ. ಇನ್ನು ಹಲವು ಮನೆಗಳಿಗೆ ಹಾನಿಯಾಗಿದ್ದು, ನೂರಾರು ನಿವಾಸಿಗಳು ತೊಂದರೆಗೀಡಾಗಿದ್ದಾರೆ.
ದೋಡಾ, ರಿಯಾಸಿ, ಕಿಶ್ತ್ವಾರ್, ರಾಂಬನ್ ಮತ್ತು ಬಾರಾಮುಲ್ಲಾ ಸೇರಿದಂತೆ ಹಲವಾರು ಗುಡ್ಡಗಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತಗಳು ಸಂಭವಿಸಿವೆ. ಶ್ರೀನಗರ -ಜಮ್ಮು ರಾಷ್ಟ್ರೀಯ ಹೆದ್ದಾರಿಯ ಹಲವು ಕಡೆಗಳಲ್ಲಿ ಕಳೆದ ಮೂರು ದಿನಗಳಿಂದ ಭೂಕುಸಿತ ಉಂಟಾಗಿದೆ. ಪ್ರವಾಹದಿಂದ ರಸ್ತೆಗಳು ಹಾಗೂ ಮನೆಗಳು ಜಲಾವೃತವಾಗಿವೆ. ನದಿಗೆ ಸಮೀಪವಿರುವ ಮನೆಯ ಒಂದು ಭಾಗ ಕೊಚ್ಚಿ ಹೋಗಿದೆ. ನಿನ್ನೆ ಅಧಿಕಾರಿಗಳು ಕುಪ್ಪಾರದ ಪುಹ್ರು ನಲ್ಲಗೆ ಅಪಾಯದ ಎಚ್ಚರಿಕೆ ನೀಡಿದ್ದಾರೆ.