ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಅವರ ಬಂದ್ರಾ ನಿವಾಸ, ಗ್ಯಾಲಕ್ಸಿ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. 2 ಬೈಕ್ನಲ್ಲಿ ಬಂದ ಅಪರಿಚಿತರು ಅಪಾರ್ಟ್ಮೆಂಟ್ ನ ಹೊರಗಡೆ ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ.
ಕಳೆದ ವರ್ಷ, ಸಲ್ಮಾನ್ ಖಾನ್ ಕೆನಡಾ ಮೂಲದ ಫ್ಯುಗಿಟಿವ್ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ನಿಂದ ಕೊಲೆ ಬೆದರಿಕೆ ಬಂದಿದ್ದು, ಬಾಲಿವುಡ್ ಸೂಪರ್ ಸ್ಟಾರ್ ತಮ್ಮ ಗ್ಯಾಂಗ್ ನ ಹಿಟ್ ಲಿಸ್ಟ್ನಲ್ಲಿದ್ದಾರೆ ಎಂದು ಬಹಿರಂಗವಾಗಿ ಘೋಷಿಸಿದರು. ಮುಂಬೈ ಪೊಲೀಸ್ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ವಿರುದ್ಧ FIR ದಾಖಲಿಸಿದ್ರು. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಕ್ರೈಂ ಬ್ರಾಂಚ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.