ಕನ್ನಡ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸದಲ್ಲಿ ಸೂಸೈಡ್ ಮಾಡಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪ್ಪು ಪಪ್ಪು, ರಾಮ್ ಲೀಲಾ, ಸ್ನೇಹಿತರು, ಸಿನಿಮಾಗಳನ್ನು ಸೌಂದರ್ಯ ಜಗದೀಶ್ ಅವರು ನಿರ್ಮಾಣ ಮಾಡಿದ್ದರು. ಅವರು ನಿರ್ಮಾಣದ ಜೊತೆಗೆ ಬಾಡಿ ಬಿಲ್ಡರ್ ಕೂಡ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಆದರೆ ಹಣದ ವ್ಯವಹಾರದಲ್ಲಿ ನಷ್ಟ ಹಾಗೂ ಸಾಲಬಾಧೆಗೆ ಸಿಲುಕಿದ್ದರು ಎನ್ನಲಾಗಿದೆ.