ಬೆಂಗಳೂರು : ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ, ಜನ ಮೆಚ್ಚಿದ ನಟ ದ್ವಾರಕೀಶ್ ಅಗಲಿಕೆಗೆ, ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಹಿರಿಯ ನಟಿ ಬಿ.ಸರೋಜಾದೇವಿ, ಭವ್ಯ, ಜಯಮಾಲಾ, ನಿರ್ದೇಶಕ ಭಾರ್ಗವ್, ನಟ ದೊಡ್ಡಣ್ಣ, ರಮೇಶ್ ಅರವಿಂದ್, ಶಿವರಾಜ್ ಕುಮಾರ್ ಸೇರಿದಂತೆ ಹಲವರು ಅಗಲಿದ ಹಿರಿಯ ನಟನಿಗೆ ಸಂತಾಪ ಸೂಚಿಸಿದ್ದಾರೆ. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ x ಖಾತೆಯ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ, ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ ‘ಪ್ರಚಂಡ ಕುಳ್ಳ’ನಾಗಿ 5 ದಶಕಗಳು ಸೇವೆ ಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ನಟ ದರ್ಶನ್ ಬರೆದುಕೊಂಡಿದ್ದಾರೆ .