ಲೋಕಸಭೆ ಚುನಾವಣೆಯಲ್ಲಿ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ದಿಸಲು ಮುಂದಾಗಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ತಿರಸ್ಕೃತವಾಗಿದೆ. ರಾಹುಲ್ ಗಾಂಧಿಯವರ ಧ್ವನಿಯನ್ನು ಅನುಕರಿಸುವ ಮೂಲಕ ದೇಶದಲ್ಲೆಡೆ ಶ್ಯಾಮ್ ರಂಗೀಲಾ ಸುದ್ದಿಯಾಗಿದ್ದರು.
ಮೋದಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಸೇರಿದಂತೆ 15 ಅಭ್ಯರ್ಥಿಗಳ ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಆದರೆ ಶ್ಯಾಮ್ ರಂಗೀಲಾ ಅರ್ಜಿ ತಿರಸ್ಕೃತವಾಗಿರುವುದಕ್ಕೆ ಸೂಕ್ತ ಕಾರಣ ತಿಳಿದು ಬಂದಿಲ್ಲ.
ಆದರೆ ಅನೇಕರು ಕಾಮಿಡಿಯನ್ ರಾಜಕೀಯವನ್ನು ಗಂಭಿರವಾಗಿ ತೆಗೆದುಕೊಳ್ಳಲು ಸಾಧ್ಯವಾಗದೇ ಇರಬಹುದು ಆದ್ದರಿಂದ ಶ್ಯಾಮ್ ರಂಗೀಲಾ ತಿರಸ್ಕೃತವಾಗಿದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.