ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬೆಳವಣಿಗೆ ನಡೆದಿದೆ. ಮೈಸೂರಿನ ಇಬ್ಬರು ದಿಗ್ಗಜ ನಾಯಕರು ಮುನಿಸು ಮರೆತು ಒಂದಾಗಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನ, ಮುಖ್ಯಮಂತ್ರಿ ಸಿದ್ದರಾಮಯ್ಯ ದಿಢೀರ್ ಭೇಟಿ ಆಗಿದ್ದಾರೆ. ಚಾಮರಾಜನಗರದಲ್ಲಿ ಹಿಡಿತ ಸಾಧಿಸಿರುವ ಶ್ರೀನಿವಾಸ್ ಪ್ರಸಾದ್, ದಲಿತ ನಾಯಕರು ಹೌದು. ಇದೇ ಕಾರಣಕ್ಕಾಗಿ ಶ್ರೀನಿವಾಸ್ ಪ್ರಸಾದ್ ಅವರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿದ್ದರಾಮುಯ್ಯ ಮುಂದಾಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮುಖಂಡರೂ ಮಾಜಿ ಸಚಿವರೂ ಆದ ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಮೈಸೂರಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ನೆಪದಲ್ಲಿ, ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.