ಲೈಂಗಿಕ ಕಿರುಕುಳ ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಪೆನ್ಡ್ರೈವ್ ಬೆಳಕಿಗೆ ಬರುತ್ತಿದ್ದಂತೆ ದೇಶದಿಂದ ಪರಾರಿ ಆಗಿರುವ ಪ್ರಜ್ವಲ್ ರೇವಣ್ಣ, ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ್ರು. ಆದರೆ ಪ್ರಜ್ವಲ್ ರೇವಣ್ಣ ಮನವಿಯನ್ನ ಎಸ್ಐಟಿ ತಿರಸ್ಕರಿಸಿದ್ದು, ಲುಕ್ಔಟ್ ನೋಟಿಸ್ ಹೊರಡಿಸಿದೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ. ಪ್ರಕರಣ ದಾಖಲಾಗುವ ಮುನ್ನವೇ ಪ್ರಜ್ವಲ್ ದೇಶದಿಂದ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.