ರಾಶಿ ಫಲಾಫಲ: ಇಂದು ಯಾವ ರಾಶಿಗಳಿಗೆ ಅದೃಷ್ಟದ ದಿನ? ಯಾರಿಗೆ ಎಚ್ಚರಿಕೆ?

Whatsapp image 2024 11 14 at 7.33.15 am

2025 ಮಾರ್ಚ್ 26ರ ಬುಧವಾರ, ಚಂದ್ರನು ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶಿಸಿ ಸುನಫ ಯೋಗವನ್ನು ಸೃಷ್ಟಿಸಿದೆ. ಈ ಗ್ರಹ ಸಂಯೋಗವು ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ಜಾತಕರ ಜೀವನದ ಮೇಲೆ ಪ್ರಭಾವ ಬೀರಲಿದೆ.ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು?

ಇಂದಿನ ಪಂಚಾಂಗ:

ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ದ್ವಾದಶೀ,

ADVERTISEMENT
ADVERTISEMENT

ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧ, ಕರಣ : ಕೌಲವ, ಸೂರ್ಯೋದಯ–06–33 am, ಸೂರ್ಯಾಸ್ತ–06–42 pm,

ಇಂದಿನ ಶುಭಾಶುಭಕಾಲ : ರಾಹು ಕಾಲ 12:38–14:10, ಯಮಘಂಡ ಕಾಲ 08:05–09:36, ಗುಳಿಕ ಕಾಲ 11:07–12:38

ಇಂದಿನ ಪಂಚಾಂಗ, ನಕ್ಷತ್ರ ಯೋಗ ಮತ್ತು ರಾಶಿಚಕ್ರಗಳ ಫಲಿತಾಂಶವನ್ನು ಇಲ್ಲಿ ತಿಳಿಯಿರಿ.

ಮೇಷ ರಾಶಿ:

ಅಹಂಕಾರ ಸುಳಿಯುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆದರೂ ಮನಸ್ಸಿಗೆ ನೆಮ್ಮದಿ ಸಿಗದು. ಯಾವುದನ್ನಾದರೂ ಸಂತೋಷದಿಂದ ಸ್ವೀಕರಿಸುವ ಮನೋಭಾವವಿರಲಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುನ್ನಡೆದರೆ ಸಾಧಿಸುವ ಹಾದಿಯು ಸರಳವಾಗುವುದು.

ವೃಶ್ಚಿಕ ರಾಶಿ:

ನಿಮ್ಮ ಕಾರ್ಯಕ್ಷಮತೆ ಕಡಿಮೆಯಾದಂತೆ ತೋರುವುದು. ಯಾವ ಹೊಸತನ್ನೂ ಸ್ವೀಕರಿಸುವ ಮಾನಸಿಕತೆ ಇಂದು ಇರದು. ಎಲ್ಲ ವಿಚಾರಕ್ಕೂ ನಿಮ್ಮ ಮೌನಮುದ್ರೆಯು ಒತ್ತಿರುವುದು. ಹೂಡಿಕೆಯನ್ನು ಹಿಂಪಡೆಯುವ ಸಾಧಿಸುವಿರಿ ಇದೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ.

ವೃಷಭ ರಾಶಿ:

ತಾಳ್ಮೆಯಿಂದ ಮುಖ್ಯ ಆಯುಧವಾಗಿರಲಿ. ವಿದೇಶದ ಕನಸು ಸದ್ಯ ಸಾಕಾರವಾಗದು. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಒಂದೇ ವಿಚಾರವನ್ನು ಮನನ‌ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ.

ಕನ್ಯಾ ರಾಶಿ:

ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು. ಸತ್ಪಾತ್ರರಿಗೆ ದಾನವನ್ನು ಮಾಡಿ. ನಿಮ್ಮ ವ್ಯಕ್ತಿತ್ವಕ್ಕೆ ಕಳಂಕವನ್ನು ಬಳಿಯಬಹುದು.

ತುಲಾ ರಾಶಿ:

ಎಲ್ಲ ವಿಚಾರದಲ್ಲಿಯೂ ಅಸಮಾಧನವು ಇರಲಿದೆ. ಪರರ ಅವಕಾಶವನ್ನು ನೋಡಿ ಮನಸ್ಸಿನಲ್ಲಿ ಸಂಕಟ. ಅತಿಯಾದ ಒತ್ತಡವು ನಿಮ್ಮ ದಕ್ಷತೆಯನ್ನು ಕಡಿಮೆ‌ ಮಾಡುವುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ.

ಮಿಥುನ ರಾಶಿ:

ಇಂದು ಮಾನಸಿಕವಾಗಿ ನೀವು ಕುಗ್ಗುವಿರಿ. ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಸುಳ್ಳಿನಿಂದ ಸಾಧಿಸಿದ ಕಾರ್ಯ ಇಂದು ಮುಳ್ಳಾಗಿ ಚುಚ್ಚುವುದು. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು.

ಮಕರ ರಾಶಿ:

ನಿಮ್ಮ ಉದ್ಯೋಗವನ್ನು ನೀವು ಪ್ರೀತಿಸುವಿರಿ. ಕೇಳಿಕೊಂಡು ಬಂದವರಿಗೆ ನಿಮ್ಮಿಂದ ಅಲ್ಪ ಸಹಾಯ ಸಿಗುವುದು. ಕುಟುಂಬದ ಜವಾಬ್ದಾರಿಯನ್ನು ಸಂಗಾತಿ ನೋಡಿಕೊಳ್ಳುವಂತೆ ಮಾಡುವಿರಿ. ಅನವಶ್ಯಕವಾಗಿ ಚಿಂತನೆಯಿಂದ ನಿಮ್ಮ ಆತ್ಮವಿಶ್ವಾಸವನ್ನು ನೀವೇ ಹಾಳುಮಾಡಿಕೊಳ್ಳುವಿರಿ.

ಕರ್ಕಾಟಕ ರಾಶಿ:

ಇಂದಿನ ಕೆಲವು ಮಾತುಗಳು ನಿಮಗೆ ಇಷ್ಟವಾಗದೇ ಹೋಗುವುದು. ಕೆಲವು ವಿಚಾರದಲ್ಲಿ ನೀವು ಆತುರರಾಗುವಿರಿ. ಮನೆಯ ಖರೀದಿಯ ಬಗ್ಗೆ ಉತ್ಸಾಹ ತೋರುವಿರಿ. ಭವಿಷ್ಯದ ಬಗ್ಗೆ ಪತಿಯಾದ ಚಿಂತನೆ ಇರಲಿದೆ.

ಧನು ರಾಶಿ:

ಉದ್ಯಮಕ್ಕೆ ಸಂಬಂಧಿಸಿದ ಸರಿಯಾದ ನಿರ್ಧಾರವನ್ನು ಯಾರಿಂದಲಾದರೂ ಪಡಡಸುಕೊಳ್ಳಿ. ನಿಮ್ಮ ಚಾಂಚಲ್ಯದ ಸ್ಥಿತಿಗೆ ಸಿಟ್ಟಾಗಬಹುದು. ಹಿರಿಯ ಅಧಿಕಾರಿಗಳ ಜೊತೆ ಸ್ನೇಹದಿಂದ ಮಾತನಾಡಿ ವಿಶ್ವಾಸ ಗಳಿಸುವಿರಿ. ಧೈರ್ಯವೇ ನಿಮ್ಮ ಗೆಲುವಿನ ಮೂಲವಾಗಿರಲಿ.

ಸಿಂಹ ರಾಶಿ:

ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ನೂತನ‌ ಸ್ನೇಹವನ್ನು ಬೆಳೆಸಿಕೊಳ್ಳುವಿರಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ. ಅಜ್ಞಾತ ಸ್ಥಳದಿಂದ ಹೊರಬರುವ ಬಗ್ಗೆ ಯೋಚಿಸುವಿರಿ.

​ಕುಂಭ ರಾಶಿ:

ಸದಾ ಅನ್ಯರ ಬಗ್ಗೆ ಆಲೋಚನೆ ಮಾಡುವುದನ್ನು ಬಿಡಿ. ನೆರೆ ಹೊರೆಯವರ ವಿಚಾರದಲ್ಲಿ ಸಣ್ಣ ಅಸಮಾಧಾನ ಇರಲಿದೆ. ದೇಹಕ್ಕೆ ತೊಂದರೆ ಮಾಡಿಕೊಳ್ಳುವ ಸನ್ನಿವೇಶವಿರಲಿದೆ. ಮನೆಯ ಬದಲಾವಣೆಯನ್ನು ಮಾಡುವಿರಿ. ನಿಮ್ಮ ನಡಿಗೆಯೇ ವಿಶ್ವಾಸದಿಂದ ಇರುವುದನ್ನು ಹೇಳುತ್ತದೆ.

ಮೀನ ರಾಶಿ:

ಮಿತ್ರರು ನಿಮಗೆ ಸಹಕಾರ ನೀಡಲಾರರು. ಸಾಲ ಮಾಡುವ ಸಂದರ್ಭವನ್ನು ತಂದುಕೊಳ್ಳುವುದು ಬೇಡ. ವಿದ್ಯಾರ್ಥಿಗಳ ಕ್ರಿಯಾಶೀಲ ವ್ಯಕ್ತಿತ್ವದಿಂದ ಎಲ್ಲರ ಗಮನವನ್ನು ಸೆಳೆಯುವರು‌. ಇಂದಿನ ಹೂಡಕೆಯು ಲಾಭದಾಯಕವಾಗಿರುವುದು.

ಗ್ರಹಗಳ ಸ್ಥಾನ ಬದಲಾವಣೆಯು ಪ್ರತಿ ರಾಶಿಯವರ ಜೀವನದ ಮೇಲೆ ವಿಭಿನ್ನ ಪರಿಣಾಮ ಬೀರುತ್ತದೆ. ಇಂದಿನ ಸುನಫ ಯೋಗವು ಕೆಲವರಿಗೆ ಸುವರ್ಣಾವಕಾಶವಾಗಿದ್ದರೆ, ಇತರರಿಗೆ ಸ್ಪರ್ಧೆ ಮತ್ತು ಸವಾಲುಗಳನ್ನು ತಂದಿದೆ. ನಿಮ್ಮ ರಾಶಿಯ ಫಲಿತಾಂಶವನ್ನು ಅನುಸರಿಸಿ, ಯೋಗ್ಯ ನಿರ್ಧಾರಗಳನ್ನು ತೆಗೆದುಕೊಳ್ಳಿ.

 

Exit mobile version