ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ಸಂಬಂಧ, ರಾಜ್ಯ ಮಹಿಳಾ ಆಯೋಗ ಎಂಟ್ರಿ ಆಗಿದೆ. ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಮಹಿಳೆಯರ ಘನತೆಗೆ, ಚಾರಿತ್ರ್ಯಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಧಕ್ಕೆ ಉಂಟು ಮಾಡಿದ್ದಾರೆ. ಈ ಹಿನ್ನಲೆ ಹೆಚ್ಡಿಕೆ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ. ಶೀಘ್ರವೇ ಕುಮಾರಸ್ವಾಮಿಗೆ ನೋಟಿಸ್ ಜಾರಿಗೊಳಿಸುತ್ತೇವೆ ಅಂತ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.
ಇನ್ನು ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿರುದ್ಧ ಮಂಡ್ಯದಲ್ಲಿ ಮಹಿಳೆಯರು ಸಿಡಿದೆದ್ದಿದ್ದಾರೆ.ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಮಂಡ್ಯದಲ್ಲಿ ಮಹಿಳೆಯರು ಪ್ರತಿಭಟನೆ, ರಸ್ತೆ ತಡೆ ನಡೆಸಿ, ಗೋ ಬ್ಯಾಕ್ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.