ಹಾಸನ; ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಸಮೀಪದಮುತ್ತಿಗೆ ಕೆರೆಯಲ್ಲಿ ಘಟನೆ ಸಂಭವಿಸಿದೆ. ಪೃಥ್ವಿ (12), ಸಾತ್ವಿಕ್(11) ಜೀವನ್(13) ವಿಶ್ವ ಎಂಬ ನಾಲ್ಕು ಬಾಲಕರು ಶಾಲೆಗೆ ರಜೆ ಇರುವುದರಿಂದ ಮೀನು ಹಿಡಿಯಲು ಹೋಗಿದ್ದರು.
ಒಬ್ಬರನ್ನೊಬ್ಬರು ರಕ್ಷಿಸುವ ಯತ್ನದಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶವಗಳಿಗಾಗಿ ಹುಡುಕಾಟ ಆರಂಭಿಸಿದ್ದು, ಸದ್ಯ ಇಬ್ಬರು ಬಾಲಕರ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.