ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಸಿಬಾರ ಗ್ರಾಮದ ಹತ್ತಿರ ಮಾರಘಟ್ಟದ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಕಲ್ಲಂಗಡಿ ತುಂಬಿದ್ದ ಲಾರಿ ಹಾಗೂ ಎರಡು ಲಾರಿಗಳು ಡಿಕ್ಕಿಯಾಗಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ಗಂಭೀರ ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಹೈವೇಯಲ್ಲಿ ಕೆಟ್ಟು ನಿಂತಿದ್ದ ಕಲ್ಲಂಗಡಿ ಲಾರಿಗೆ ಇತರ ಎರಡು ಲಾರಿಗಳು ಹಿಂದಿನಿಂದ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಗ್ರಾಮಾಂತರ ಠಾಣೆಯ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.